info@jayakarnataka.com +91 804222977
December 31, 2019 - BY Admin

Gadag Jayakarnataka

ದಿನಾಂಕ 26-12-2019 ರಂದು ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್. ಚಂದ್ರಪ್ಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಗೌಡ, ಆನೇಕಲ್ ತಾಲೂಕು ಅಧ್ಯಕ್ಷರಾದ ಕಿರಣ್ ಪ್ರಭಾಕರ್ ರೆಡ್ಡಿ ಮತ್ತು ಸರ್ಜಾಪುರ ಹೋಬಳಿಯ ಅಧ್ಯಕ್ಷರಾದ ನವೀನ್ ಬಿ.ಎಸ್ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರ ಗ್ರಾಮದಲ್ಲಿ ಪ್ರಥಮ ಭಾರಿಗೆ ಜಯಕರ್ನಾಟಕ ಸಂಘಟನೆ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಹಾಗೂ ಸಾಧನೆ ಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ರಾಮಚಂದ್ರಯ್ಯ, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.